Breaking News

“ರಾಜ್ಯದಲ್ಲಿ ಅಭಿವೃದ್ಧಿ ಬಿಟ್ಟು ಕುರ್ಚಿ ರಾಜಕಾರಣ” – ಹುಬ್ಬಳ್ಳಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ

ರಾಜ್ಯಪಾಲರನ್ನು ಗಾಂಧಿ ಕುಟುಂಬ ಯಾವ ರೀತಿ ನಡೆಸಿಕೊಂಡಿದೆ ಎಂಬುದು ದೇಶಕ್ಕೆ ಗೊತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 90 ಬಾರಿ ರಾಷ್ಟ್ರಪತಿ ಆಡಳಿತ ಬರುವಂತೆ ಮಾಡಿದ್ದು ಕಾಂಗ್ರೆಸ್ ಪಕ್ಷವೇ ಎಂದು ಆರೋಪಿಸಿದರು. ವಿಕಸಿತ್ ಭಾರತ್ ಜಿ ರಾಮ್ ಜಿ ಯೋಜನೆಯಲ್ಲಿ ಏನು ತಪ್ಪಾಗಿದೆ ಎಂದು ಪ್ರಶ್ನಿಸಿದ ವಿಜಯೇಂದ್ರ, ಸಾವಿರಾರು ಕೋಟಿ ರೂಪಾಯಿ ಭ್ರಷ್ಟಾಚಾರ ಆಗಬಾರದು, ಬಡವರಿಗೆ ಅನುಕೂಲ ಆಗಬೇಕು ಎಂಬ ಉದ್ದೇಶದಿಂದ 100 ದಿನಗಳ ಯೋಜನೆಯನ್ನು 125 ದಿನಗಳಿಗೆ ಹೆಚ್ಚಿಸಲಾಗಿದೆ ಎಂದರು. ಇದನ್ನೇ ನೆಪ ಮಾಡಿಕೊಂಡು ವಿಶೇಷ ಅಧಿವೇಶನ ಕರೆದು ಕೇಂದ್ರ ಸರ್ಕಾರದ ವಿರುದ್ಧ ಭಾಷಣ ಮಾಡುವುದು ಸರಿಯಲ್ಲ ಎಂದು ಟೀಕಿಸಿದರು. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರ 60 ಶೇಕಡಾ, ರಾಜ್ಯ ಸರ್ಕಾರ 40 ಶೇಕಡಾ ಅನುದಾನ ನೀಡುತ್ತದೆ. ಯಾರೇ ಹಣ ಕೊಟ್ಟರೂ ಗ್ರಾಮೀಣ ಭಾಗದ ಅಭಿವೃದ್ಧಿಯೇ ಮುಖ್ಯ. ಆದರೆ ಯಾವುದೇ ಯೋಜನೆಯಾದರೂ ಸಮರ್ಪಕವಾಗಿ ಜಾರಿಗೆ ತರಲು ರಾಜ್ಯ ಸರ್ಕಾರ ಜವಾಬ್ದಾರಿ ಹೊತ್ತು ಬಂಡವಾಳ ಹಾಕಬೇಕು ಎಂದು ಹೇಳಿದರು. ಇದೇ ವೇಳೆ ದಾವೋಸ್‌ನಲ್ಲಿ ವಿವಿಧ ದೇಶಗಳು ಹಾಗೂ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸಿದ್ದಾರೆ. ಆದರೆ ಅನುಭವಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಲಿಗೆ ಹೋಗದೇ ಇಲ್ಲಿಯೇ ರಾಜಕಾರಣದಲ್ಲಿ ತೊಡಗಿದ್ದಾರೆ. ದಾವೋಸ್‌ಗೆ ಹೋಗದೆ ಇರುವುದು ಜನರಿಗೆ ಮಾಡುವ ಅನ್ಯಾಯ ಎಂದು ವಿಜಯೇಂದ್ರ ಆರೋಪಿಸಿದರು. ಕೊನೆಗೂ ಡಿ.ಕೆ.ಶಿವಕುಮಾರ್ ದಾವೋಸ್‌ಗೆ ತೆರಳಿದ್ದಾರೆ ಎಂದರು. ಮಹದಾಯಿ ವಿಷಯದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುತುವರ್ಜಿ ವಹಿಸಿದ್ದಾರೆ ಎಂದು ಸ್ಪಷ್ಟಪಡಿಸಿದ ಅವರು, ಕಾಂಗ್ರೆಸ್ ಸರ್ಕಾರ ನಿನ್ನೆ ನಡೆದ ಮನೆ ಹಂಚಿಕೆ ಕಾರ್ಯಕ್ರಮದಲ್ಲಿ ನಾಟಕ ಮಾಡಿ ಹೋಗಿದೆ. ಬಡವರಿಗೆ ಹಕ್ಕುಪತ್ರ ನೀಡದೇ ಕೇವಲ ರಾಜಕೀಯ ಪ್ರದರ್ಶನ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದು ರಾಜ್ಯದಲ್ಲಿ ನಡೆಯುತ್ತಿರುವ ಚರ್ಚೆ ಅಭಿವೃದ್ಧಿಯ ಬಗ್ಗೆ ಅಲ್ಲ, ಸಿಎಂ ಕುರ್ಚಿ ಖಾಲಿಯಾಗುವ ವಿಷಯದ ಬಗ್ಗೆ ಮಾತ್ರ ಎಂದು ಬಿಜೆಪಿ ರಾಜ್ಯಾಧ್ಯಕ್ಷರು ಹೇಳಿದರು.

Share News

About BigTv News

Check Also

ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಗಲಾಟೆ – ರುಬ್ಬುಗುಂಡಿನ ಕಲ್ಲಿನಿಂದ ಹೊಡೆದು ಯುವಕನ ಭೀಕರ ಕೊಲೆ

ಹೊಸಪೇಟೆ: ನಗರದ ಸಿದ್ದಲಿಂಗಪ್ಪ ಚೌಕಿಯ 4ನೇ ಕ್ರಾಸ್‌ನ ಎಲ್ಲಮ್ಮ ದೇವಸ್ಥಾನದ ಬಳಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ …

Leave a Reply

Your email address will not be published. Required fields are marked *