Breaking News

ಬೆಳಗಾವಿಯಲ್ಲಿ ಭೀಕರ ಅಪಘಾತ : ನಿಂತಿದ್ದ ಕಾರಿಗೆ ಕಂಟೇನರ್ ಡಿಕ್ಕಿ, ಸ್ಥಳದಲ್ಲೇ ದಂಪತಿ ದುರ್ಮರಣ!

ಬೆಳಗಾವಿಯಲ್ಲಿ ಭೀಕರವಾದ ಅಪಘಾತ ಒಂದು ಸಂಭವಿಸಿದ್ದು ರಸ್ತೆ ಬದಿ ನಿಂತಿದ್ದ ಕಾರಿಗೆ ವೇಗವಾಗಿ ಬಂದಂತಹ ಕಂಟೇನರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ದಂಪತಿಗಳು ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೂಗನೋಳ್ಳಿ ಎಂಬಲ್ಲಿ ಈ ಒಂದು ಅಪಘಾತ ಸಂಭವಿಸಿದ್ದು, ಮೃತ ದಂಪತಿಗಳು ಕೊಲ್ಲಾಪುರದ ಮೂಲದವರು ಎಂದು ತಿಳಿದುಬಂದಿದೆ. ಹುಬ್ಬಳ್ಳಿಯಿಂದ ಕೊಲ್ಲಾಪುರಕ್ಕೆ ತೆರಳುವಾಗ ಕೂಗನೋಳ್ಳಿ ಎಂಬಲ್ಲಿ ದಂಪತಿಗಳು ಕಾರು ನಿಲ್ಲಿಸಿದ್ದಾರೆ. ಈ ವೇಳೆ ಹಿಂಬದಿಯಿಂದ ವೇಗವಾಗಿ ಬಂದಂತಹ ಕಂಟೇನರ್ ಒಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತಾದರು ಕೂಡ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಘಟನೆ ಕುರಿತು ನಿಪ್ಪಾಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *