Breaking News

ತುಮಕೂರು: ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು, ನಾಲ್ಕು ಮಂದಿಗೆ ಗಾಯ

ತುಮಕೂರು: ತಾಲ್ಲೂಕಿನ ನೆಲಹಾಳ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸೋಮವಾರ ಬೆಳಿಗ್ಗೆ ಲಾರಿಗೆ ಕಾರು ಡಿಕ್ಕಿಯಾಗಿ, ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಅನಿಕೇತ್, ಅಭೀರ್, ಆಂಧ್ರಪ್ರದೇಶದ ಸನ್ಮುಕ್ತಿ ಮೃತರು. ಎಲ್ಲರು ಬೆಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದರು. ಗೋಕರ್ಣ, ಮುರುಡೇಶ್ವರ, ಉಡುಪಿ ಕಡೆಗೆ ಪ್ರವಾಸಕ್ಕೆ ತೆರಳಿದ್ದರು. ಬೆಂಗಳೂರಿಗೆ ವಾಪಸ್ ಹೋಗುವಾಗ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಮುಂದೆ ಸಾಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ಅಂಗಡಿಯಲ್ಲೇ ಮಾಲೀಕನ ಬರ್ಬರ ಕೊಲೆ

ಬೆಂಗಳೂರು: ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗೃಹೋಪಯೋಗಿ ವಸ್ತುಗಳ ಅಂಗಡಿ ಮಾಲೀಕ ರಾಜು ಸಿಂಗ್ ಅವರನ್ನು ಅಂಗಡಿಯೊಳಗೇ ಬರ್ಬರವಾಗಿ ಕೊಲೆ …

Leave a Reply

Your email address will not be published. Required fields are marked *