Breaking News

ವಿವಾಹದ ಮನೆಯಲ್ಲಿ ಚಿನ್ನಾಭರಣ ಕಳವು

ಉಪ್ಪಳ: ವಿವಾಹದ ತಯಾರಿ ನಡೆಯುತ್ತಿದ್ದ ಬಪ್ಪಾಯಿತೊಟ್ಟಿಯ ರುಕ್ಸಾನ ಅವರ ಮನೆಯಿಂದ ಸುಮಾರು 23 ಲಕ್ಷ ರೂ. ಮೌಲ್ಯದ 23.5 ಪವನ್‌ ಚಿನ್ನಾಭರಣಗಳನ್ನು ಕಳವು ಮಾಡಲಾಗಿದೆ. ಜ.23 ರಂದು ಮಗಳ ವಿವಾಹ ನಿಶ್ಚಿತಾರ್ಥ ನಡೆದಿತ್ತು. ಮನೆಯ ನವೀಕರಣ ನಡೆಯುತ್ತಿದ್ದಾಗ ಕಳವು ನಡೆದಿದೆ. ಜನವರಿ 15 ರಂದು ಮಧ್ಯಾಹ್ನ 2 ಗಂಟೆಯಿಂದ ಜ.21 ರ ಸಂಜೆ 6 ಗಂಟೆಯೊಳಗೆ ಕಳವು ನಡೆದಿರಬೇಕೆಂದು ಮಂಜೇಶ್ವರ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *