ಸುಳ್ಯ: ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಸುಳ್ಯದ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿರುವ ಘಟನೆ ರವಿವಾರ ಸಂಭವಿಸಿದೆ. ಅಜ್ಜಾವರ ಗ್ರಾಮದ ದೊಡ್ಡೇರಿ ನಿವಾಸಿ ಕೃಷ್ಣಪ್ಪ ನಾಯ್ಕ (70) ಮೃತರು. ಕೃಷ್ಣ್ಪಪ್ಪ ಅವರ ಮೃತದೇಹ ಸುಳ್ಯದ ಓಡಬಾಯಿ ಬಳಿ ಪಯಸ್ವಿನಿ ನದಿಯಲ್ಲಿ ಪತ್ತೆಯಾಗಿದೆ. ಕಳೆದೆರಡು ದಿನಗಳಿಂದ ನಾಪತ್ತೆಯಾಗಿದ್ದ ಕೃಷ್ಣಪ್ಪ ಅವರಿಗಾಗಿ ಮನೆಯವರು ಹುಡುಕಾಟ ನಡೆಸಿದ್ದರು. ನದಿ ದಾಟುವ ವೇಳೆ ಅಥವಾ ಇನ್ನಾವುದೋ ಕಾರಣಕ್ಕೆ ನದಿಗೆ ಇಳಿದ ವೇಳೆ ಆಕಸ್ಮಿಕವಾಗಿ ನದಿ ನೀರಲ್ಲಿ ಮುಳುಗಿ ಮೃತಪಟ್ಟಿರುವ ಬಗ್ಗೆ ಶಂಕಿಸಲಾಗಿದೆ. ಸುಳ್ಯ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದು, ಅಸ್ವಾಭಾವಿಕ ಮರಣ ಪ್ರಕರಣ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

