ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಾಟ್‌ನ ಅಪಾಯಕಾರಿ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ. ಚೆನ್ನೈನ ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಗಳು ಪ್ರವಾಸಕ್ಕಾಗಿ ಗೋಕರ್ಣಕ್ಕೆ ತೆರಳುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆಯಲ್ಲೇ ಪಲ್ಟಿ ಹೊಡೆದಿದೆ. ಅಪಘಾತದ ರಭಸಕ್ಕೆ ವಾಹನದಲ್ಲಿದ್ದ ಸುಮಾರು ಆರೇಳು ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಅಪಘಾತ ಸಂಭವಿಸುತ್ತಿದ್ದಂತೆ ಸಾರ್ವಜನಿಕರು ತಕ್ಷಣ ನೆರವಿಗೆ ಧಾವಿಸಿದ್ದಾರೆ. ಸಾಮಾಜಿಕ ಕಾರ್ಯಕರ್ತರಾದ ಬಾಲಕೃಷ್ಣ ನಾಯ್ಕ ಅರಬೈಲ್ ಹಾಗೂ ಸತೀಶ ನಾಯ್ಕ ಅವರು ಗಾಯಾಳುಗಳಿಗೆ ನೆರವಾದರು. 108 ಆಂಬುಲೆನ್ಸ್ ಸಹಾಯದಿಂದ ಗಾಯಾಳುಗಳನ್ನು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ವಿದ್ಯಾರ್ಥಿಗಳು ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಯಲ್ಲಾಪುರ ಪಿಎಸ್‌ಐ ಸಿದ್ದುಗುಡಿ ಹಾಗೂ ತಂಡದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ಸಂಚಾರ ದಟ್ಟಣೆಯನ್ನು ಸುಗಮಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

