ಹುಬ್ಬಳ್ಳಿಯಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಹಕ್ಕುಪತ್ರ ವಿತರಣೆ ಬಗ್ಗೆ ನಮ್ಮ ಅಭ್ಯಂತರವೇನಿಲ್ಲ, ಆದರೆ ಹಕ್ಕುಪತ್ರದ ಜೊತೆ ಕ್ವಾಟರ್ ಬಾಟಲಿ ಹಂಚುವ ಸಂಸ್ಕೃತಿ ಯಾವ ಸಂದೇಶ ನೀಡುತ್ತದೆ? ಎಂದು ಪ್ರಶ್ನಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಜನ ಸೇರಲಿದ್ದಾರೆ. ಜನರನ್ನು ಮದ್ಯ ಸೇವನೆಗೆ ಕರೆಸುವ ಉದ್ದೇಶವೇನು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮನೆ ನಿರ್ಮಾಣ ಕಾರ್ಯ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದ್ದು, ಸಚಿವ ವಿ. ಸೋಮಣ್ಣ ಅವರ ಕಾಲದಲ್ಲೇ ಭೂಮಿ ಪೂಜೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಅದಕ್ಕೆ ಸಂಬಂಧಿಸಿದ ಪ್ರೂಫ್ ನೀಡಲು ನಾವು ಸಿದ್ಧ ಎಂದಿದ್ದಾರೆ. ಕಾಂಗ್ರೆಸ್ಗೆ ಧೈರ್ಯವಿದ್ದರೆ ಅಭಿವೃದ್ಧಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಲಿ ಎಂದು ಸವಾಲು ಹಾಕಿದ್ದಾರೆ. ನಾವು ಪ್ರಧಾನಿ ಮೋದಿ ಅವರನ್ನು ಕೇಳುತ್ತೇವೆ, ನಿಮ್ಮ ರಾಜ್ಯದ ಪಾಲು ಎಲ್ಲಿದೆ ಎಂದು ಪ್ರಶ್ನಿಸುತ್ತೇವೆ ಎಂದು ಹೇಳಿದ್ದಾರೆ. ಇನ್ನು 40% ಆರೋಪದ ಕುರಿತು ಮಾತನಾಡಿದ ಅವರು, ಜಿ ರಾಮ್ ಜೀ 40% ಕೊಡೋಕೆ ಎಲ್ಲಿಂದ ಹೇಗೆ ಕೊಡೋದು ಅಂತ ಚಿಂತೆ ಮಾಡ್ತಿದ್ದೀರಿ. ಅದರ ಬಗ್ಗೆ ಮುಖ್ಯಮಂತ್ರಿ ಮತ್ತು ಶಾಸಕರು ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. ರಾಜ್ಯಪಾಲರ ಹುದ್ದೆ ಸಂವಿಧಾನಿಕವಾದದ್ದು. ಸರ್ಕಾರ ಅದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ತಮ್ಮ ಕರ್ತವ್ಯವನ್ನು ನಿಭಾಯಿಸಿದ್ದಾರೆ. ರಾಷ್ಟಗೀತೆ ಹಾಕುವ ಬಟನ್ ಯಾರ ಕೈಯಲ್ಲಿರುತ್ತದೆ ಎಂಬುದನ್ನು ಸರ್ಕಾರ ತಿಳಿದುಕೊಳ್ಳಬೇಕು ಎಂದು ಹೇಳಿದ್ದಾರೆ. ರಾಷ್ಟಪತಿ ಅಂಕಿತ ಹಾಕಿದ ವಿಧೇಯಕಕ್ಕೆ 11 ಪುಟ ಬರೆದು ವಿರೋಧ ಮಾಡುತ್ತಿರುವುದು ಸರಿಯಲ್ಲ.
ರಾಜ್ಯಪಾಲರ ಹುದ್ದೆಯೇ ಬೇಡ ಎಂದರೆ ಅಂಬೇಡ್ಕರ್ ಅವರ ಸಂವಿಧಾನದ ಮೇಲೆ ವಿಶ್ವಾಸವಿದೆಯೋ ಇಲ್ಲವೋ ಎಂಬುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟಪಡಿಸಲಿ ಎಂದು ಮಹೇಶ್ ಟೆಂಗಿನಕಾಯಿ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

