Breaking News

ಹಳೇ ದ್ವೇಷ: ಪರಿಚಯಸ್ಥರಿಂದಲೇ ರೌಡಿಶೀಟರ್‌ ಹತ್ಯೆ

ಬೆಂಗಳೂರು: ಹಳೇ ದ್ವೇಷ ಹಿನ್ನೆಲೆ ಯಲ್ಲಿ ಪರಿಚಯಸ್ಥರೇ ರೌಡಿ ಶೀಟರ್‌ ನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿರುವ ಘಟನೆ ಮಾದ ನಾಯಕ ನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಗೊಂಡನಹಳ್ಳಿ ನಿವಾಸಿ ನಾಗ ಅಲಿಯಾಸ್‌ ಆಟೋ ನಾಗ (32) ಕೊಲೆಯಾದ ರೌಡಿಶೀಟರ್‌. ನೆಲಮಂಗಲದ ಫಾರ್ಮ್ ಹೌಸ್‌ನಲ್ಲಿ ಭಾನುವಾರ ಮಧ್ಯಾಹ್ನ ದುರ್ಘ‌ಟನೆ ನಡೆದಿದೆ. ಪರಿಚಯಸ್ಥರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಕೊಲೆಯಾದ ನಾಗ ಆಟೋ ಚಾಲನೆ ಮಾಡಿಕೊಂಡು ಜೀವನ ನಡೆಸುತ್ತಿದ್ದು, ಈತನ ವಿರುದ್ಧ ನಗರ ವಿವಿಧ ಠಾಣೆಗಳಲ್ಲಿ ಹಲ್ಲೆ, ಸುಲಿಗೆ ಸೇರಿ ಹಲ ವಾರು ಪ್ರಕರಣಗಳ ಆರೋಪಿ ಯಾಗಿದ್ದಾನೆ. ಅಲ್ಲದೆ, ಈತನ ವಿರುದ್ಧ ರಾಜಗೋಪಾಲ ನಗರ, ಚಿತ್ರದುರ್ಗದ ಹುಲಿಯೂರು ದುರ್ಗ ಠಾಣೆಯಲ್ಲಿ ರೌಡಿಪಟ್ಟಿ ತೆರೆಯಲಾಗಿದೆ. ಭಾನುವಾರ ಮಧ್ಯಾಹ್ನವಷ್ಟೇ ನಾಲ್ಕೈದು ಮಂದಿ ಸ್ನೇಹಿತರ ಜತೆ ನೆಲಮಂಗಲದ ಬಾಲಾಜಿ ಫಾರ್ಮ್ ಹೌಸ್‌ಗೆ ಬಂದಿದ್ದಾನೆ. ಈ ವೇಳೆಯೇ ಕೆಲವರು ಆತನ ಮೇಲೆ ಮಾರಕಾಸ್ತ್ರ ಗಳಿಂದ ದಾಳಿ ನಡೆಸಿ ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದಾರೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೃತ್ಯ ನಡೆದಿರುವ ಸಾಧ್ಯತೆಯಿದೆ. ತನಿಖೆ ನಡೆಯುತ್ತಿದೆ.

Share News

About BigTv News

Check Also

ಹಂಪಿ ಎಕ್ಸ್‌ಪ್ರೆಸ್ ರೈಲಿಗೆ ಆಕಸ್ಮಿಕ ಬೆಂಕಿ

ಬಳ್ಳಾರಿ : ಹಂಪಿ ಎಕ್ಸ್‌ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …

Leave a Reply

Your email address will not be published. Required fields are marked *