Breaking News

ಮದುವೆಯಾದ 45 ದಿನಕ್ಕೇ ದುಡುಕಿದ ನವವಿವಾಹಿತ ಆತ್ಮಹತ್ಯೆ

ದಾವಣಗೆರೆ: ಮದುವೆಯಾದ 45 ದಿನಕ್ಕೆ ನವವಿವಾಹಿತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಾವಣಗೆರೆ ತಾಲೂಕಿನ ಗುಮ್ಮನೂರಿನಲ್ಲಿ ಘಟನೆ ನಡೆದಿದೆ. ಹರೀಶ್(30) ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ನನ್ನ ಸಾವಿಗೆ ಪತ್ನಿಯ ವರ್ತನೆ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತನ್ನ ಪತ್ನಿಯ ನಡತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಕಿರುಕುಳ ನೀಡುತ್ತಿದ್ದ ಆರೋಪ ಮಾಡಿದ್ದಾರೆ. ಪತ್ನಿ ಹಾಗೂ ಆಕೆಯ ತಂದೆ, ತಾಯಿ, ಚಿಕ್ಕಪ್ಪನಿಗೆ ಜೀವಾವಧಿ ಶಿಕ್ಷೆಯಾಗಲಿ. ಪತ್ನಿ ಕಿರುಕುಳ ನೀಡುತ್ತಿದ್ದಳು. ಆಕೆಯ ಸಂಬಂಧಿಕರಿಂದ ಜೀವ ಬೆದರಿಕೆ ಇತ್ತು, ಈ ಕಾರಣಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ ಎಂದು ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ದಾವಣಗೆರೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *