Breaking News

ಹಲಸಂಗಿ | ಚಿನ್ನದಂಗಡಿ ದರೋಡೆ: ವಿದ್ಯಾರ್ಥಿಗೆ ಗುಂಡು

ಚಡಚಣ(ವಿಜಯಪುರ ಜಿಲ್ಲೆ): ತಾಲ್ಲೂಕಿನ ಹಲಸಂಗಿಯಲ್ಲಿ ಸೋಮವಾರ ದುಷ್ಕರ್ಮಿಗಳು ಪಿಸ್ತೂಲ್‌ನಿಂದ ಗುಂಡು ಹಾರಿಸಿ, ಚಿನ್ನದ ಅಂಗಡಿ ದರೋಡೆ ಮಾಡಿದ್ದಾರೆ. ಆತ್ಮಲಿಂಗ ಹೂಗಾರ (18) ಎಂಬ ವಿದ್ಯಾರ್ಥಿಗೆ ಗುಂಡು ತಗುಲಿ ಗಾಯವಾಗಿದೆಹಲಸಂಗಿ ಮುಖ್ಯರಸ್ತೆಯಲ್ಲಿರುವ ಮಹಾರುದ್ರ ಕಂಚಾಗಾರ ಅವರ ‘ಭೂಮಿಕಾ’ ಜ್ಯುವೆಲ್ಲರಿ ಶಾಪ್‌ಗೆ ಇಬ್ಬರು ಮುಸುಕುಧಾರಿ ವ್ಯಕ್ತಿಗಳು ಬೈಕ್ ಮೇಲೆ ಬಂದು, 205 ಗ್ರಾಂ ಚಿನ್ನಾಭರಣ ಮತ್ತು 1 ಕೆಜಿ ಬೆಳ್ಳಿ ದೋಚಿದ್ದಾರೆ’ ಎಂದು ಎಸ್‌ಪಿ ಲಕ್ಷ್ಮಣ ನಿಂಬರಗಿ ಸುದ್ದಿಗಾರರಿಗೆ ತಿಳಿಸಿದರು. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದ ಅನಿಲ್ ಬಸಣ್ಣ ಗಲಗಲಿ ಮೇಲೆ ದುಷ್ಕರ್ಮಿ ಗುಂಡು ಹಾರಿಸಿದ. ಅದು ಅಂಗಡಿ ಎದುರು ನಿಂತಿದ್ದ ಆತ್ಮಲಿಂಗ ಹೂಗಾರ ಎಂಬುವರ ಬಲಗಾಲಿಗೆ ತಗುಲಿದೆ’ ಎಂದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *