ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ನಡೆದಿದೆ. ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ. ಹಿಂಬದಿ ಸವಾರರಾಗಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಕೆಯ ಪತಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಜೀವನ್ ಬೈಕಿನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಪಿರಿಯಾಪಟ್ಟಣ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಈ ಗಟನಾ ಸಂಬಂಧ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

