Breaking News

ಸಿರುಗುಪ್ಪದಲ್ಲಿ ರಸ್ತೆ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಇರುವ ಸಿರುಗುಪ್ಪ ನಗರದ ಶ್ರೀಮತಿ ದಿ. ಹೊನ್ನೂರಮ್ಮ ದಿ. ಶ್ರೀ ಎಂ. ಸಿದ್ದಪ್ಪ ಪ್ರಥಮ ದರ್ಜೆ ಕಾಲೇಜು ಬಳಿ ದ್ವಿಚಕ್ರ ವಾಹನಕ್ಕೆ ಕೆಕೆಆರ್‍ಟಿಸಿ ಬಸ್ ಮಂಗಳವಾರ ಮಧ್ಯಾಹ್ನ ಡಿಕ್ಕಿ ಹೊಡೆದ ಕಾರಣ ದ್ವಿಚಕ್ರ ವಾಹನ ಸವಾರಿ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕುರುವಳ್ಳಿ ಗ್ರಾಮದ ಗುರು ಮಹರ್ಷಿ ಕಾಲೇಜಿನ ಡಿಪ್ಲೊಮಾ ವಿದ್ಯಾರ್ಥಿಗಳಾದ ಶಿವಲಿಂಗಮ್ಮ (20) ಮತ್ತು ಅಭಿ (22). ಅಪಘಾತ ನಡೆದಾಗ ವಿದ್ಯಾರ್ಥಿಗಳು ಒಂದೇ ವಾಹನದಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಮಧ್ಯಾಹ್ನ 2.30ರ ಸುಮಾರಿಗೆ ರಸ್ತೆ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಎಂ.ಎಸ್. ಸಿದ್ದಪ್ಪ ಅವರು ಆಗಮಿಸಿ, ಮೃತರ ದೇಹಗಳನ್ನು ಶವಾಗಾರಕ್ಕೆ ಕಳುಹಿಸುವಲ್ಲಿ ನೆರವಾಗಿ, ಮೃತ ವಿದ್ಯಾರ್ಥಿಗಳ ಕುಟುಂಬಗಳಿಗೆ ಸಾಂತ್ವನ ಹೇಳಿದರು. ಘಟನೆ ಕುರಿತು ಪ್ರಕರಣ ದಾಖಲಾಗಿದೆ. ತನಿಖೆ ನಡೆದಿದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *