Breaking News

ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್‌ ಸಾವು

ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅಜಿತ್ ಪವಾರ್ ಸೇರಿದಂತೆ ಪಿಎಸ್‌ಒ ಜಾಧವ್, ಓರ್ವ ಸಹಾಯಕ, ಇಬ್ಬರು ಪೈಲೈಟ್‌ಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಖಚಿತಪಡಿಸಿದೆ.ಮಹಾರಾಷ್ಟ್ರದಲ್ಲಿ ನಿಗದಿಯಾಗಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಸಮಾವೇಶದಲ್ಲಿ ಪಾಲ್ಗೊಳ್ಳಲು ಅಜಿತ್ ಅವರು ಮುಂಬೈಯಿಂದ ಬಾರಾಮತಿಗೆ ಹೊರಟಿದ್ದರು ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ಸಂಪರ್ಕಿಸಿ ಬಾರಾಮತಿ ವಿಮಾನ ದುರಂತದ ಬಗ್ಗೆ ಮಾಹಿತಿ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *