Breaking News

ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್​​ ಬಸ್​​

ಶಿವಮೊಗ್ಗ: ಚಿತ್ರದುರ್ಗದ ಬಳಿ ನಡೆದ ಬಸ್​​ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್​​ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *