Breaking News

ಗೌರಿಬಿದನೂರು | ರಸ್ತೆ ಅಪಘಾತ, ಇಬ್ಬರ ಸಾವು

ನಗರದ ಇಡಗೂರು ರಸ್ತೆಯಲ್ಲಿ ಮಂಗಳ ಬೆಳ್ಳಂಬೆಳಗ್ಗೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಇಡಗೂರು ಗ್ರಾಮದ ನಾಗರಾಜು (37) ಮತ್ತು ಮಿಥುನ್ (22) ಮೃತರು. ಈ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ಮುಂಜಾನೆ ಸುಮಾರು 5 ಗಂಟೆಗೆ ಗ್ರಾಮದ ನಾಗರಾಜು ಮತ್ತು ಮಿಥುನ್ ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್‌ನಲ್ಲಿದ್ದ ಇಬ್ಬರು ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *