Breaking News

ಪರಪ್ಪನ ಅಗ್ರಹಾರ ಜೈಲಲ್ಲಿ ದಿಢೀರ್ ದಾಳಿ ವೇಳೆ ನಿಷೇಧಿತ ವಸ್ತುಗಳು ಪತ್ತೆ

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಪರಿಶೀಲನೆ ಮುಂದುವರೆದಿದೆ. ಕೈದಿಗಳ ಬ್ಯಾರಕ್ ಮೇಲೆ ದಾಳಿ ಮಾಡಿ ನಿಷೇಧಿತ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಜೈಲಿನ ಟವರ್ 1ರ 6ನೇ ಬ್ಯಾರಕ್ 4ನೇ ಕೊಠಡಿಯ ಮೇಲೆ ದಾಳಿ ಮಾಡಲಾಗಿದೆ. 8 ಮೊಬೈಲ್, 1 ಸಿಮ್, 2 ಚಾರ್ಜರ್, 3 ಈಯರ್ ಫೋನ್ ಪತ್ತೆಯಾಗಿವೆ. ಕಳೆದ ಎರಡು ತಿಂಗಳಿನಿಂದ 200 ಕ್ಕೂ ಹೆಚ್ಚು ಮೊಬೈಲ್ ಗಳನ್ನು ಸೀಜ್ ಮಾಡಲಾಗಿದೆ. ಕಾರಾಗೃಹ ಡಿಜಿಪಿಯಾಗಿ ಅಲೋಕ್ ಕುಮಾರ್ ನೇಮಕ ಬಳಿಕ ಅಕ್ರಮಕ್ಕೆ ಕಡಿವಾಣ ಹಾಕಲಾಗಿದೆ. ಕಡಿವಾಣ ಹಾಕದಿದ್ದರೆ ಕ್ರಮ ಕೈಗೊಳ್ಳುವುದಾಗಿ ಅವರು ಖಡಕ್ ಎಚ್ಚರಿಕೆ ನೀಡಿದ್ದರು. ಎಚ್ಚೆತ್ತುಕೊಂಡ ಜೈಲಾಧಿಕಾರಿಗಳು ಬ್ಯಾರಕ್ ಗಳ ಮೇಲೆ ದಾಳಿ ಮಾಡಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಜೈಲಾಧಿಕಾರಿಗಳು ನಿರಂತರ ದಾಳಿ ಮಾಡುತ್ತಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *