Breaking News

ಚಾಮರಾಜನಗರ | ಬಸ್ ಡಿಕ್ಕಿ: ಸವಾರ ಸಾವು

ಚಾಮರಾಜನಗರ ತಾಲ್ಲೂಕಿನ ಮಲೆಯೂರು ಗ್ರಾಮದಲ್ಲಿ ಮಂಗಳವಾರ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡಿದ್ದಾರೆ. ಮಲೆಯೂರು ಶಿವಸ್ವಾಮಿ (34) ಮೃತರು. ಗಾಯಗೊಂಡಿರುವ ನಾಗರಾಜು ಅವರನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದ ತಿರುವಿನಲ್ಲಿ ಮುಕ್ಕಡಹಳ್ಳಿಗೆ ಹೋಗುವ ರಸ್ತೆಯಲ್ಲಿ ಬೆಳಿಗ್ಗೆ ಬಸ್‌ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಢಿಕ್ಕಿ ಸಂಭವಿಸಿದೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಬಸ್‌ ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ ಬಾಂಬ್ ಬೆದರಿಕೆ: ಪರಿಶೀಲನೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಸೋಮವಾರ ಪೊಲೀಸರು ಪರಿಶೀಲನೆ ನಡೆಸಿದರು. …

Leave a Reply

Your email address will not be published. Required fields are marked *