Breaking News

ಅಕ್ರಮ ಗೋಮಾಂಸ ಮಾರಾಟ: ಮೂವರು ಆರೋಪಿಗಳ ಬಂಧನ

ಶಿರಹಟ್ಟಿ: ಸ್ಥಳೀಯ ಮಖಾನ ಗಲ್ಲಿಯ ಮೂವರು ನಿವಾಸಿಗಳು ಕಸಾಯಿಖಾನೆಯಿಂದ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಲಕ್ಷಾಂತರ ರೂಪಾಯಿ ಬೆಲೆಬಾಳುವ ದನ- ಕರುಗಳನ್ನು ಕಡಿದು ಮಾಂಸವನ್ನು ಮಾರಾಟ ಮಾಡುತ್ತಿರುವಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಗುಲಾಮ ಹುಸೇನ ದಸ್ತಗೀರಸಾಬ ಆದ್ರಳ್ಳಿ, ಅಮಜಾದ ದಸ್ತಗೀರಸಾಬ ಆದ್ರಳ್ಳಿ, ಅಲ್ಲಾಭಕ್ಷ ದಸ್ತಗೀರಸಾಬ ಆದ್ರಳ್ಳಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ಸ್ವಂತ ಲಾಭಕೋಸ್ಕರ ಅಕ್ರಮವಾಗಿ ಗೋಮಾಂಸ ಮಾರಾಟ ದಂಧೆಯಲ್ಲಿ ತೊಡಗಿದ್ದರು. ಆರೋಪಿಗಳಿಂದ 3 ಆಕಳು, 1 ಆಕಳು ಕರ, 1 ಹೋರಿಕರ, 1 ಎಮ್ಮೆ, 1 ಎಮ್ಮೆಕರ ಹಾಗೂ ಗೋವುಗಳನ್ನು ಕಡಿಯಲು ಬಳಕೆ ಮಾಡುತ್ತಿದ್ದ ಪರಿಕರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಶಿರಹಟ್ಟಿ ಪೊಲೀಸ್‌ ಠಾಣೆಯ ಪಿಎಸ್‌ಐ ಈರಪ್ಪ ರಿತ್ತಿ ಅವರು ಸರ್ಕಾರದ ಪರವಾಗಿ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *