Breaking News

ಡಿಜಿಪಿ ರಾಮಚಂದ್ರರಾವ್‌ ವಿರುದ್ಧ ಆತುರಾತುರ ಕ್ರಮ: ದಸಂಸ ಕಿಡಿ

ಬೆಂಗಳೂರು: ಡಿಜಿಪಿ ರಾಮಚಂದ್ರರಾವ್‌ ವಿಚಾರದಲ್ಲಿ ಸರ್ಕಾ ರ ಆತುರದ ಕ್ರಮ ಕೈಗೊಂಡಿದ್ದು, ಈ ಹಿನ್ನೆಲೆಯಲ್ಲಿ ಪುನಃ ಅವರನ್ನು ಹುದ್ದೆಗೆ ತೆಗೆದುಕೊಳ್ಳಬೇಕೆಂದು ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾ ಡಿದ ಒಕ್ಕೂಟದ ಮುಖಂಡ ರಾದ ಆರ್‌.ಕಿರಣ್‌ ಕುಮಾರ್‌, ವಿ.ವಿಜಯನ್‌ ಸೇರಿದಂತೆ ಮತ್ತಿತರರು ಸರ್ಕಾರದ ನಿರ್ಧಾರ ನೋವುಂಟು ಮಾಡಿದೆ. ಜಾಲತಾಣದಲ್ಲಿ ಹರಿಬಿಡಲಾಗಿರುವ ವಿಡಿಯೋಗಳನ್ನು ಸುಳ್ಳು-ನಿಜವೋ ಎಂದು ಪರಿಶೀಲನೆ ನಡೆಸದೆ, ವಿಧಿ ವಿಜ್ಞಾನ ಪರೀಕ್ಷೆಗೆ ಕಳುಹಿಸದೇ ಸರ್ಕಾರ ಕ್ರಮ ಜರುಗಿಸಿರುವುದು ಸರಿಯಲ್ಲ. ನಕಲಿ ಚಿತ್ರೀಕರಣ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಸರ್ಕಾರ ಪ್ರಕರಣ ತನಿಖೆ ನಡೆಸದೆ ಹೋದರೆ ಮುಂದಿನ ದಿನಗಳಲ್ಲಿ ಬೃಹತ್‌ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದರು.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *