Breaking News

ಹೆದ್ದಾರಿ ಭೀಕರ ರಸ್ತೆ ಅಪಘಾತ – ಇಬ್ಬರು ಸ್ಥಳದಲ್ಲೇ ಸಾವು!

ಗೋವಾ-ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ರಾಮನಗರ ಸಮೀಪದ ಅಸ್ತೋಲಿಯಲ್ಲಿ ನಡೆದಿದೆ. ರೆನಾಲ್ಟ್ ಕ್ವಿಡ್ ಕಾರಿನಲ್ಲಿದ್ದ ಚಾಲಕ ರುದ್ರಯ್ಯ ಶಿವನವರ (77) ಹಾಗೂ ರೇಣುಕಾ ಹಿರೇಮಠ (60) ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ರಾಮನಗರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗೋವಾದಿಂದ ಹುಬ್ಬಳ್ಳಿಯತ್ತ ತೆರಳುತ್ತಿದ್ದ ಇನೋವಾ ಕಾರು ಹಾಗೂ ಹುಬ್ಬಳ್ಳಿಯಿಂದ ಗೋವಾಕ್ಕೆ ಸಾಗುತ್ತಿದ್ದ ರೆನಾಲ್ಟ್ ಕ್ವಿಡ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ತೀವ್ರತೆಗೆ ರೆನಾಲ್ಟ್ ಕ್ವಿಡ್ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಮಾಹಿತಿ ಪಡೆದ ತಕ್ಷಣ ರಾಮನಗರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *