Breaking News

ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ: ಬೈಕ್ ಸವಾರನ ದೇಹ ಛಿದ್ರ ಛಿದ್ರ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪಘಾತಗಳ ಸಂಖ್ಯೆ ಮತ್ತೆ ಹೆಚ್ಚುತ್ತಿದೆ. ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಯಲಹಂಕ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಟಿಪ್ಪರ್ ಬೈಕ್ ಗೆ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರನ ದೇಹ ಛಿದ್ರ ಛಿದ್ರಗೊಂಡಿದೆ. ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿದ್ದಾರೆ. ಮೃತ ಬೈಕ್ ಸವಾರ ಹೊರ ರಾಜ್ಯದವನೆಂದು ತಿಳಿದುಬಂದಿದೆ. ಮೃತನ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಹಣಕಾಸಿನ ವಿಚಾರಕ್ಕೆ ಸ್ನೇಹಿತನ ಕೊಲೆ: ಮೃತದೇಹ ಸುಟ್ಟು ನದಿಗೆ ಎಸೆದ ಆರೋಪ; ನಾಲ್ವರ ಬಂಧನ

ಬಳ್ಳಾರಿ: ಹಣಕಾಸಿನ ವಿಚಾರವಾಗಿ ನಡೆದ ಗಲಾಟೆಯಲ್ಲಿ ಸ್ನೇಹಿತನನ್ನೇ ಕೊಲೆ ಮಾಡಿ, ಸಾಕ್ಷ್ಯ ನಾಶಪಡಿಸಲು ಮೃತದೇಹವನ್ನು ಸುಟ್ಟು ಮೂಳೆ ಹಾಗೂ ಬೂದಿಯನ್ನು …

Leave a Reply

Your email address will not be published. Required fields are marked *