ಶಿವಮೊಗ್ಗ: ಮಾದಕ ವಸ್ತುಗಳ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿರುವ ಪೊಲೀಸರು, ಹಲವು ಆರೋಪಿಗಳನ್ನು ಬಂಧಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ 4 ಲಕ್ಷ ಮೌಲ್ಯದ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೊಮ್ಮನಕಟ್ಟಿ ಗ್ರಾಮದಲ್ಲಿ ದಾಳಿ ನಡೆಸಿದ ಭದ್ರಾವತಿ ಪೇಪರ್ ಟೌನ್ ಠಾಣೆ ಪೊಲೀಸರು ಹುಲ್ಲಿನ ಬಣವಿಯಲ್ಲಿ ಅಡಗಿಸಿಟ್ಟಿದ್ದ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.4 ಲಕ್ಷ ರೂಪಾಯಿ ಮೌಲ್ಯದ 8 ಕೆಜಿ ಗಾಂಜಾವನ್ನು ಹುಲ್ಲಿನ ಬಣವಿಯಲ್ಲಿ ಸಂಗ್ರಹಿಸಿದಳಾಗಿತ್ತು. ಇವುಗಳನ್ನು ಜಪ್ತಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಬ್ದುಲ್ ಎಂದು ಗುರುತಿಸಲಾಗಿದೆ. ಈತ ಭದ್ರಾವತಿಯಲ್ಲಿ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದ ಎಂದು ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

