Breaking News

ಬೆಂಗಳೂರು: ಲಿಫ್ಟ್‌ ಕುಸಿದು ಇಬ್ಬರ ಸಾವು

ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೆಳಗೆರೆ ರಸ್ತೆಯಲ್ಲಿ ಎಸ್‌ಎಸ್‌ವಿಆರ್‌ ಕನ್ಸ್‌ಸ್ಟ್ರಕ್ಷನ್‌ ನಿರ್ಮಿಸುತ್ತಿರುವ ಅಪಾರ್ಟ್‌ಮೆಂಟ್‌ ಕಾಮಗಾರಿ ಸ್ಥಳದಲ್ಲಿ ಸರಕು ಸಾಗಣೆಯ ಲಿಫ್ಟ್‌ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ಲಿಫ್ಟ್‌ ಆಪರೇಟರ್ ಸತ್ಯಕುಮಾರ್ ಹಾಗೂ ಲಿಫ್ಟ್‌ ಮೆಕಾನಿಕ್‌ ಮುತ್ತಪ್ಪ ಮೃತ ಕಾರ್ಮಿಕರು. ಬುಧವಾರ ಸಂಜೆ ಕೆಲಸ ಮಾಡುತ್ತಿದ್ದ ವೇಳೆ ಲಿಫ್ಟ್‌ ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಗುರುವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದರು. ಸತ್ಯಕುಮಾರ್ ಅವರ ಪತ್ನಿ ದೂರು ನೀಡಿದ್ದಾರೆ. ಗುತ್ತಿಗೆದಾರ ಸುಧೀರ್ ಹಾಗೂ ಎಂಜಿನಿಯರ್ ವಿರುದ್ಧ ನಿರ್ಲಕ್ಷ್ಯ ಆರೋಪದ ಅಡಿ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್‌ 106(1) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು. ಶುಕ್ರವಾರ ಬೆಳಿಗ್ಗೆ ವೈದೇಹಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗುವುದು ಎಂದು ಪೊಲೀಸರು ಹೇಳಿದರು.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *