ಕೆಜಿ ರಸ್ತೆಯ ಕಂದಾಯ ಭವನದ ಬಳಿ ತಡರಾತ್ರಿ 12.40 ರ ಸುಮಾರಿಗೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಸ್ಥಳಕ್ಕೆ ಹೊಯ್ಸಳ ಸಿಬ್ಬಂದಿ ದೌಡ ಹೋಗಿದ್ದರು. ಸ್ಥಳೀಯರು ಗಾಯಾಳುವನ್ನು ಆಟೋ ಮೂಲಕ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದರು, ಅಲ್ಲಿ ಬೈಕ್ ಸವಾರ ದಾಖಲೆಯಾಗಿದ್ದಾರೆ. ಅಪರಿಚಿತ ವಾಹನ ಡಿಕ್ಕಿ ಹೊಡೆದು ಎಸ್ಕೇಪ್ ಆದಿದ್ದು, ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ವಾಹನವನ್ನು ಪತ್ತೆಹಚ್ಚಲು ಶೋಧ ಆರಂಭಿಸಿದ್ದಾರೆ. ಈ ಘಟನೆ ಹಲಸೂರು ಗೇಟ್ ಸಂಚಾರ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

