ಬ್ರಹ್ಮಾವರ: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡಿಸುವ ಪೋಸ್ಟ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ನಡೆದಿದೆ.ಬ್ರಹ್ಮಾವರ ವಾರಂಬಳ್ಳಿ ಗ್ರಾಮದ ಸಂತೋಷ ಕುಮಾರ್ ಶೆಟ್ಟಿ (56), ಕೋಟೇಶ್ವರ ಗ್ರಾಮದ ಕೆ.ನಾಗರಾಜ(62) ಬಂಧಿತರು. ಧರ್ಮಧರ್ಮಗಳ ಮಧ್ಯೆ ದ್ವೇಷ ಹರಡಿಸುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ ಬಗ್ಗೆ ಈ ಇಬ್ಬರು ಆರೋಪಿಗಳ ವಿರುದ್ಧ ಜ.29ರ ಶುಕ್ರವಾರ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಉಡುಪಿ ಡಿವೈಎಸ್ಪಿ ಪ್ರಭು ಡಿ.ಟಿ. ಹಾಗೂ ಬ್ರಹ್ಮಾವರ ಪೊಲೀಸ್ ವೃತ್ತ ನಿರೀಕ್ಷಕ ಗೋಪಿಕೃಷ್ಣ ಮಾರ್ಗದರ್ಶನದಲ್ಲಿ ಬ್ರಹ್ಮಾವರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಅಶೋಕ ಮಾಳಾಬಗಿ, ಸುದರ್ಶನ್ ದೊಡಮನಿ ಹಾಗೂ ಠಾಣಾ ಸಿಬ್ಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

