Breaking News

ಮಣಿಪುರ: ನಿಷೇಧಿತ ಸಂಘಟನೆಯ ಮೂವರು ಸೆರೆ

ಇಂಫಾಲ: ಮಣಿಪುರದ ಪೂರ್ವ ಇಂಫಾಲ ಜಿಲ್ಲೆಯಲ್ಲಿ, ನಿಷೇಧಿತ ಸಂಘಟನೆಗಳಿಗೆ ಸೇರಿದ ಮೂವರು ಸದಸ್ಯರನ್ನು ಭದ್ರತಾ ಪಡೆಗಳು ಬಂಧಿಸಿವೆ ಎಂದು ಪೊಲೀಸರು ಶುಕ್ರವಾರ ತಿಳಿಸಿದರು. ನಿಷೇಧಿತ ಕಾಂಗ್ಲೀಪಾಕ್ ಕಮ್ಯುನಿಸ್ಟ್ ಪಾರ್ಟಿಯ ಇಬ್ಬರು ಸದಸ್ಯರನ್ನು ಜಿಲ್ಲೆಯ ಪ್ಯಾಲೆಸ್‌ ಗೇಟ್‌ ಬಳಿ ಹಾಗೂ ಪ್ರಿಪಾಕ್ ಸಂಘಟನೆಯ ಒಬ್ಬ ಸದಸ್ಯನನ್ನು ನೊಂಗದದಲ್ಲಿ ಗುರುವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದರು. ಟೆಂಗ್‌ನೌಪಾಲ್ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಚುರಾಚಂದ್‌ಪುರದಲ್ಲಿ 36 ಕೆ.ಜಿಗಿಂತ ಅಧಿಕ ತೂಕದ ಅಫೀಮನ್ನು ಬುಧವಾರ ವಶಪಡಿಸಿಕೊಳ್ಳಲಾಗಿದೆ ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *