Breaking News

ಮನೆಗೆಲಸದವನಿಂದ ಪೈಶಾಚಿಕ ಕೃತ್ಯ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆಗೈದು ಆತ್ಮಹತ್ಯೆ

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 65 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಬಳಿಕ ನೇಣು ಹಾಕಿಕೊಂಡು ಆರೋಪಿ ದೇವರಾಜ್(50) ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಮನೆಗೆಲಸ ಮಾಡುತ್ತಿದ್ದ ದೇವರಾಜ್ ಕೃತ್ಯವೆಸಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಕೃತ್ಯ ನಡೆದಾಗ ಮನೆಯ ಮೊದಲ ಮಹಡಿಯಲ್ಲಿ ಮಹಿಳೆಯ ಪುತ್ರಿ ಇದ್ದರು. ಮುಂಜಾನೆ ಮಹಿಳೆಯ ಪತಿ ಮನೆಗೆ ಬಂದು ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಮೈಕೋ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *