Breaking News

ಸ್ನೇಹಿತರ ನಡುವೆ ಗಲಾಟೆ, ಚಾಕುವಿನಿಂದ ಇರಿದು ಕೊಲೆ

ಬೆಂಗಳೂರಿನಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ ಮಾಡಲಾಗಿದೆ. ಮನೆಯ ಬಳಿಗೆ ಆಟೋ ನಿಲ್ಲಿಸುವ ವಿಚಾರಕ್ಕೆ ಮೂವರ ನಡುವೆ ಗಲಾಟೆಯಾಗಿದೆ. ಸ್ನೇಹಿತರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ನಾಯಂಡಹಳ್ಳಿಯ ಅಂಬೇಡ್ಕರ್ ಕಾಲೋನಿಯಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಗುಣ ಮತ್ತು ವೇಲು ಇಬ್ಬರಿಗೂ ಚಾಕುವಿನಿಂದ ಇರಿದು ಆರೋಪಿ ವಿನೋದ್ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಗುಣ ಸಾವನ್ನಪ್ಪಿದ್ದು, ಗಾಯಾಳು ವೇಲು ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದೆ. ಮೃತಪಟ್ಟ ಗುಣ, ಆರೋಪಿ ವಿನೋದ್ ಮತ್ತು ಗಾಯಾಳು ವೇಲು ಮೂವರು ಸ್ನೇಹಿತರಾಗಿದ್ದರು. ಮೂವರು ಕೊಲೆ ಪ್ರಕರಣವೊಂದರ ಆರೋಪಿಗಳಾಗಿದ್ದಾರೆ. ಮನೆಯ ಬಳಿ ಆಟೋ ನಿಲ್ಲಿಸುವ ವಿಚಾರಕ್ಕೆ ಗಲಾಟೆಯಾಗಿದೆ. ಎರಡು ದಿನಗಳ ಹಿಂದೆ ಮೂವರ ನಡುವೆ ಗಲಾಟೆ ಆಗಿತ್ತು. ನಿನ್ನೆ ಬೈಕ್ ನಲ್ಲಿ ಬರುತ್ತಿದ್ದ ವೇಳೆಯಲ್ಲಿ ವೇಲು ಮತ್ತು ಗುಣ ಅವರನ್ನು ಅಡ್ಡಗಟ್ಟಿದ ವಿನೋದ್ ಇಬ್ಬರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಕುತ್ತಿಗೆ ಭಾಗಕ್ಕೆ ಚಾಕುನಿಂದ ಇರಿದ ಪರಿಣಾಮ ಗುಣ ಸಾವನ್ನಪ್ಪಿದ್ದಾನೆ. ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿದಿದ್ದರಿಂದ ವೇಲು ಬದುಕುಳಿದಿದ್ದಾನೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *