Breaking News

ಮಂಡ್ಯ: ಚಲಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ; ಅಣ್ಣ-ತಂಗಿ ಸಾವು

ನಾಗಮಂಗಲ (ಮಂಡ್ಯ ಜಿಲ್ಲೆ): ಚಲಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಅಣ್ಣ- ತಂಗಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿ, ಮೂವರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಬೇಗಮಂಗಲ ಅಂಚೆಭೂವನಹಳ್ಳಿ ನಡುವಿನ ಚಾಮರಾಜನಗರ- ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಬೆಳಿಗ್ಗೆ ಸಂಭವಿಸಿದೆ. ಬೆಂಗಳೂರಿನ ಕತ್ತರಗುಪ್ಪೆಯ ನಿವಾಸಿಗಳಾದ ರವೀಂದ್ರರಾಜ್ ಕೃಷ್ಣ ಅವರ ಮಕ್ಕಳಾದ ಮವೀನ (20) ಮತ್ತು ಶ್ಯಾಮ್ (21) ಮೃತಪಟ್ಟವರು. ಕಾರಿನಲ್ಲಿದ್ದ ಹಿತಶ್ರೀ, ಕಲಾಶ್ರೀ ಹಾಗೂ ಕಾರು ಚಾಲಕ ಚೇತನ್ ಗಾಯಗೊಂಡಿದ್ದಾರೆ. ಬೆಂಗಳೂರಿನಿಂದ ಕಾರಿನಲ್ಲಿ ಒಂದೇ ಕುಟುಂಬದ ಐವರು ತಾಲ್ಲೂಕಿನ ಕೋಟೆಬೆಟ್ಟದಲ್ಲಿ ನಡೆಯುತ್ತಿದ್ದ ಜಾತ್ರಾ ಮಹೋತ್ಸವಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಗಮಂಗಲ ಕಡೆಗೆ ಚಲಿಸುತ್ತಿದ್ದ ಟಿಪ್ಪರ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *