ಕೊಪ್ಪಳ ಜಿಲ್ಲೆಯಿಂದ ಬಂದಿರುವ ಈ ಸುದ್ದಿ ಈಗ ರಾಜ್ಯದಾದ್ಯಂತ ಚರ್ಚೆಗೆ ಕಾರಣವಾಗಿದೆ. ಪೊಲೀಸ್ ಕಾನ್ಸ್‌ಟೇಬಲ್ ಒಬ್ಬರು, ಕೆಲಸದ ಒತ್ತಡ ಮತ್ತು ರಜೆ ಇಲ್ಲದ ದುಡಿಮೆಯ ಬಗ್ಗೆ ಬೇಸರ ವ್ಯಕ್ತಪಡಿಸಿ, ವಾಟ್ಸಾಪ್ ಸ್ಟೇಟಸ್ ಹಾಕಿರುವುದು ವೈರಲ್ ಆಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನಮಸಾಗರ ಪೊಲೀಸ್ ಠಾಣೆಯ ಪೇದೆ ಬ್ರಹ್ಮಾನಂದ ಅವರು,
“ವರ್ಷದ 365 ದಿನವೂ ಕೆಲಸ… ರಜೆ ಇಲ್ಲ… ಪೊಲೀಸ್ ಕೆಲಸಕ್ಕಿಂತ ರಸ್ತೆಯಲ್ಲಿ ನಿಂತು ಎಗ್ ರೈಸ್ ಮಾರುವುದು ಉತ್ತಮ” ಎಂದು ವಾಟ್ಸಾಪ್ ಸ್ಟೇಟಸ್ ಹಾಕಿದ್ದರು. ಇತ್ತೀಚೆಗೆ ರಾಜ್ಯದಲ್ಲಿ 8,300 ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಡಿಜಿ–ಐಜಿಪಿ ಡಾ. ಎಂ.ಎ. ಸಲೀಂ ಹೇಳಿಕೆ ನೀಡಿದ ಬೆನ್ನಲ್ಲೇ, ಹೊಸದಾಗಿ ಪೊಲೀಸ್ ಇಲಾಖೆಗೆ ಸೇರುವ ಯುವಕರಿಗೆ ಎಚ್ಚರಿಕೆ ನೀಡುವ ಧಾಟಿಯಲ್ಲಿ ಈ ಸ್ಟೇಟಸ್ ಪ್ರಕಟಿಸಿದ್ದಾರೆ. ಪೊಲೀಸ್ ಇಲಾಖೆಯೊಳಗಿನ ಕೆಲಸದ ಒತ್ತಡ, ರಜೆಗಳ ಕೊರತೆ ಮತ್ತು ಮಾನಸಿಕ ಒತ್ತಡಕ್ಕೆ ಈ ಸ್ಟೇಟಸ್ ಕನ್ನಡಿ ಹಿಡಿದಂತಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಎಲ್. ಅರಸಿದ್ದಿ ಅವರು ತನಿಖೆಗೆ ಆದೇಶಿಸಿದ್ದಾರೆ. ತನಿಖಾ ವರದಿ ಬಳಿಕ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಒಟ್ಟಿನಲ್ಲಿ, ಪೇದೆ ಬ್ರಹ್ಮಾನಂದ ಅವರ ಈ ‘ಎಗ್ ರೈಸ್’ ಸ್ಟೇಟಸ್, ಪೊಲೀಸ್ ಸಿಬ್ಬಂದಿಯ ಕೆಲಸದ ಪರಿಸ್ಥಿತಿಗಳ ಬಗ್ಗೆ ಹೊಸ ಚರ್ಚೆಗೆ ವೇದಿಕೆ ಒದಗಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

