ಹುಬ್ಬಳ್ಳಿ : ಚಾಕೊಲೇಟ್ ಕೊಡುವುದಾಗಿ ಹೇಳಿ 8 ವರ್ಷದ ಬಾಲಕಿ ಮೇಲೆ ವೃದ್ಧ ಲೈಂಗಿಕ ದೌರ್ಜನ್ಯ ನಡೆಸಿ ಹೀನ ಕೃತ್ಯವೆಸಗಿರುವ ಘಟನೆ ಹುಬ್ಬಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಈ ಘಟನೆ ಜ.29ರಂದು ನಡೆದಿದೆ ಎನ್ನಲಾಗಿದ್ದು ತಡವಾಗಿ ಬೆಳಕಿಗೆ ಬಂದಿದೆ. 75 ವರ್ಷದ ವೃದ್ಧ ತನ್ನ ಪಕ್ಕದ ಮನೆಯ ಬಾಲಕಿಯ ಮೇಲೆ ಈ ಹೀನ ಕೃತ್ಯವೆಸಗಿದ್ದಾನೆ. ಈ ಸಂಬಂಧ ವೃದ್ಧನ ವಿರುದ್ಧ ಹುಬ್ಬಳ್ಳಿಯ ಅಶೋಕನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವೃದ್ಧನನ್ನು ಬಂಧಿಸಲಾಗಿದೆ. ತನ್ನ ಮೊಮ್ಮಗಳ ವಯಸ್ಸಿನ ಪುಟ್ಟ ಬಾಲಕಿಯ ಮೇಲೆ ಈ ವೃದ್ಧ ಮೃಗದಂತೆ ಎರಗಿದ್ದು, ಚಾಕೊಲೇಟ್ ಕೊಡಿಸೋದಾಗಿ ತನ್ನ ಮನೆಗೆ ಕರೆಸಿಕೊಂಡು ಈ ಕೃತ್ಯವೆಸಗಿದ್ದಾನೆ. ಈ ಘಟನೆ ಬಗ್ಗೆ ಕುಟುಂಬಸ್ಥರು ಹಾಗೂ ಸ್ಥಳೀಯರು ಆಘಾತ ವ್ಯಕ್ತಪಡಿಸಿದ್ದು, ಆರೋಪಿಗೆ ತಕ್ಕ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ. ಈ ವಯಸ್ಸಿನಲ್ಲಿ ಇಂಥಾ ನೀಚ ಕೃತ್ಯವೆಸಗಿದ ವೃದ್ಧನಿಗೆ ಗ್ರಾಮಸ್ಥರು ಹಿಡಿಶಾಪ ಹಾಕಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

