Breaking News

ಕುಳಗೇರಿ ಕ್ರಾಸ್: ಕಲ್ಲಿನಿಂದ ಜಜ್ಜಿದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ,…ಪೊಲೀಸರಿಂದ ಶೋಧ

ಕಲ್ಲಿನಿಂದ ಜಜ್ಜಿ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗ್ರಾಮದ ಹೊರವಲಯದ ನಿರಾಣ ಸಕ್ಕರೆ ಕಾರ್ಖಾನೆ ಬಳಿ ಗೌರಿಶಂಕರ್ ಅವರ ತೋಟದಲ್ಲಿ ನಡೆದಿದೆ. ಕಾಕನೂರ ಗ್ರಾಮದ ಸೋಮಶೇಖರ ಹನಮಂತ ಕಿಳ್ಳಿಕ್ಯಾತರ ವಯಾ (45) ಎಂದು ಗುರಿತಿಸಲಾಗಿದ್ದು ರವಿವಾರ ರಾತ್ರಿ ಈ ಘಟನೆ ನಡೆದಿರಬಹುದು ಎಂದು ಹೇಳಿಲಾಗುತ್ತಿದೆ.ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕೊಲೆ ಮಾಡಿದ ವ್ಯಕ್ತಿಗಳು ಪರಾರಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಘಟನೆ ಸಂಬಂದ ನಿಖರವಾದ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಎಸ್ಪಿ ಸಿದ್ಧಾರ್ಥ ಗೋಯಲ್ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಈಗಾಗಲೇ ಮೃತರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಆರೋಪಿಗಳ ಪತ್ತೆಗೆ ಜಾಲಬೀಸಿದ್ದು ಸದ್ಯ ಕೆಲವರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಡಿವೈಎಸ್‌ಪಿ ಸಂತೋಷ ಬನಹಟ್ಟಿ, ಸಿಪಿಐ ಕರಿಯಪ್ಪ ಬನ್ನೆ, ಪಿಎಸ್‌ಐ ಹನಮಂತ ನರಳೆ ಭೇಟಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಸುಖೋ ಟೀಮ್ ಬಂದು ಪರಿಶೀಲನೆ ನಡೆಸಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *