ದಾವಣಗೆರೆಯಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡನ ಇನ್ನಿಬ್ಬರು ಪುತ್ರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಅಯೂಬ್ ಪುತ್ರರಾದ ಹುಸೇನ್(26), ಹಮ್ಜಾ(24) ಅವರನ್ನು ವಶಕ್ಕೆ ಪಡೆಯಲಾಗಿದೆ. ಜನವರಿ 31 ರಂದು ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ಮಾಡಿದ್ದರು.ದಾವಣಗೆರೆಯ ಬಡಾವಣೆ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಗಾಯತ್ರಿ ಕಾನ್ಸ್ಟೇಬಲ್ ಗಳಾದ ಹರೀಶ್ ಮತ್ತು ಕೆಂಚಪ್ಪ ಅವರ ಮೇಲೆ ಹಲ್ಲೆ ಮಾಡಿದ್ದರು. ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೀಗ ಪ್ರಕರಣ ಸಂಬಂಧ ಮತ್ತಿಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

