Breaking News

ಪುತ್ತೂರು – ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವು

ಕ್ಷುಲ್ಲಕ ಕಾರಣಕ್ಕೆ ಮನನೊಂದು ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ 19 ವರ್ಷದ ಪ್ರಾಯದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಮೃತರನ್ನು ತಲೆಪ್ಪಾಡಿ ಬೆಟ್ಟಂಪಾಡಿ ನಿವಾಸಿ ಅಶ್ರಫ್ ಅವರ ಪುತ್ರ ಮೊಹಮ್ಮದ್‌ ಸುಹೈಬ್‌ (19 ) ಎಂದು ಗುರುತಿಸಲಾಗಿದೆ. ಯುವಕ ಪಿಯುಸಿವರೆಗೆ ಓದಿದ್ದು, ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ, ದಿನಾಂಕ 28.01.2026 ರಂದು ಬೆಳಿಗ್ಗೆ ಮೊಹಮ್ಮದ್‌ ಸುಹೈಬ್‌ ಯಾವುದೋ ಕಾರಣದಿಂದಾಗಿ ಮನನೊಂದು ಇಲಿ ಪಾಷಣವನ್ನು ಸೇವಿಸಿದ್ದಾನೆ. ವಿಷಯ ತಿಳಿದ ಮನೆಯವರು ಕೂಡಲೇ ಚಿಕಿತ್ಸೆ ಬಗ್ಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಫಾದರ್‌ ಮುಲ್ಲಾರ್‌ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಆದರೆ ಮೊಹಮ್ಮದ್‌ ಸುಹೈಬ್‌ ನು ಚಿಕಿತ್ಸೆಯಲ್ಲಿದ್ದವನು ಚಿಕಿತ್ಸೆಗೆ ಸ್ಪಂದಿಸದೇ ದಿನಾಂಕ 02.02.2026 ರಂದು ಬೆಳಿಗ್ಗೆ 05.15 ಗಂಟೆಗೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿರುತ್ತಾರೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣಾ UDR ನಂ 06/2026 ಕಲಂ 194 ಬಿಎನ್ ಎಸ್ ಎಸ್ 2023ಯಂತೆ ಪ್ರಕರಣ ದಾಖಲಾಗಿರುತ್ತದೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *