Breaking News

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟ

ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 30 ವರ್ಷ ಶಿಕ್ಷೆ ಪ್ರಕಟಬೆಳಗಾವಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಶಂಕರ ನಗರ ನಿವಾಸಿ ದರ್ಶನ ಭಗವಂತ ಹುಣಶ್ಯಾಳಿ ( 23),ಅಪರಾಧಿಗೆ 30 ವರ್ಷ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರೂ.ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.
ಬಾಲಕಿಗೆ 2024 ರಲ್ಲಿ ಅಪರಾಧಿಯು ಪ್ರೀತಿಸುವ ನಾಟಕವಾಡಿ ಮದುವೆ ಆಗುತ್ತೆನೆ ಎಂದು ಪುಸಲಾಯಿಸಿ ಅಪಹರಣ ಮಾಡಿ ಒತ್ತಾಯ ಪೂರ್ವಕವಾಗಿ ದೌರ್ಜನ್ಯವೆಸಗಿ, ಜೀವ ಬೆದರಿಕೆಯೊಡ್ಡಿದ ಕುರಿತು ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ದೂರು ದಾಖಲಿಸಿಕೊಂಡ ತನಿಖಾಧಿಕಾರಿ ಎಸ್.ಎಮ್ ಅವಜಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ,ವಿಶೇಷ ಶೀಘ್ರಗತಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಪ್ರಕರಣ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪಿಸಿದ ಶಿಕ್ಷೆ ವಿಧಿಸಿ ತೀರ್ಪು ಹೇಳಿದ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 4 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶ ಹೊರಡಿಸಲಾಗಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *