Breaking News

ಪೊಲೀಸರಿಗೆ ಮಾಹಿತಿ ನೀಡದೆ ಪೋಕ್ಸೊ ಪ್ರಕರಣ ಬಾಲಕಿಗೆ ಗರ್ಭಪಾತ: ವೈದ್ಯೆ ಅಮಾನತು

ಶಿವಮೊಗ್ಗ: ಪೋಕ್ಸೊ ಪ್ರಕರಣ ಎಂದು ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದೆ ಬಾಲಕಿಗೆ ಗರ್ಭಪಾತ ಮಾಡಿಸಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮುದಾಯ ಆರೋಗ್ಯ ಕೇಂದ್ರದ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಡಾ.ಡಿ. ಪ್ರತಿಮಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಸಾಗರದ ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಗೆ ಗರ್ಭಪಾತ ಮಾಡಿಸಿದ ಹಿನ್ನೆಲೆಯಲ್ಲಿ ಡಾ. ಪ್ರತಿಮಾ ಸೇರಿ 9 ಜನರ ವಿರುದ್ಧ ನವೆಂಬರ್ 6ರಂದು ಪ್ರಕರಣ ದಾಖಲಾಗಿತ್ತು. ಸಾಗರ ನಗರ ಠಾಣೆ ಪೋಲೀಸರು ಪೋಕ್ಸೊ ಕಾಯ್ದೆ ಅಡಿ ಎಫ್‌ಐಆರ್ ದಾಖಲಿಸಿದ್ದರು. ಸಾಗರ ಟೌನ್ ಪೋಲಿಸ್ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ ತನಿಖಾ ತಂಡ ಪ್ರಕರಣದ ಬಗ್ಗೆ ನೀಡಿದ ವರದಿ ಮತ್ತು ದಾಖಲೆ ಪರಿಶೀಲಿಸಿದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮತ್ತು ಸಾಗರ ತಾಲೂಕು ವೈದ್ಯಾಧಿಕಾರಿ ಜಂಟಿ ಪರಿಶೀಲನಾ ವರದಿ ಸಲ್ಲಿಸಿದ್ದರು. ವೈದ್ಯೆ ಡಾ. ಪ್ರತಿಮಾ ವಿರುದ್ಧ ಕರ್ತವ್ಯ ಲೋಪ ಸೇರಿದಂತೆ ಗಂಭೀರ ಆರೋಪಗಳು ಮೇಲ್ನೋಟಕ್ಕೆ ಸಾಬೀತಾಗಿವೆ. ಇದನ್ನು ಆದರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಗುರುದತ್ತ ಹೆಗಡೆ ಅವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *