Breaking News

ಆಸ್ಪತ್ರೆಗೆ ದಾಖಲಾಗಿದ್ದ ಪತ್ನಿ – ಚಿಕಿತ್ಸೆಗೆಂದು ಕಾರಿನಲ್ಲಿಟ್ಟಿದ್ದ ಹಣಕ್ಕೆ ಕನ್ನ!

ನೆಲಮಂಗಲದಲ್ಲಿ ವ್ಯಕ್ತಿಯೋರ್ವ ಪತ್ನಿಯ ಚಿಕಿತ್ಸೆಗಾಗಿ ಸಂಗ್ರಹಿಸಿ ಇಟ್ಟಿದ್ದ ಹಣವನ್ನು ಖದೀಮರು ದೋಚಿದ್ದಾರೆ. ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಜಿಎಸ್ ಆಸ್ಪತ್ರೆ ಬಳಿ ಘಟನೆ ನಡೆದಿದೆ. ಚಿಕ್ಕಬಾಣವರ ನಿವಾಸಿ ಹೇಮಣ್ಣ ಎಂಬುವವರು ತಮ್ಮ ಪತ್ನಿ ಅನಸೂಯ ಅವರಿಗೆ ಅನಾರೋಗ್ಯ ಹಿನ್ನೆಲೆ ನಗರೂರು ಸಮೀಪದ ಬಿಜಿಎಸ್ ಆಸ್ಪತ್ರೆಗೆ ಆಯುರ್ವೇದ ಚಿಕಿತ್ಸೆಗಾಗಿ ತೆರಳಿದ್ದ ವೇಳೆ ಕಳ್ಳರು ಕರಾಮತ್ತು ತೋರಿಸಿದ್ದಾರೆ. ಚಿಕಿತ್ಸೆಗಾಗಿ ಹೇಮಣ್ಣ ಸುಮಾರು ಎರಡು ಲಕ್ಷ ಐವತ್ತು ಸಾವಿರ ರೂಪಾಯಿ ಸಾಲ ಪಡೆದು ಕಾರಿನ ಬ್ಯಾಗ್‌ನಲ್ಲಿ ಇಟ್ಟುಕೊಂಡಿದ್ದರು. ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿ ವಾಪಸ್ ಬರುವಷ್ಟರಲ್ಲಿ ದುಷ್ಕರ್ಮಿಗಳು ಕಾರಿನ ಗ್ಲಾಸ್ ಒಡೆದು ನಗದು ದೋಚಿ ಪರಾರಿಯಾಗಿದ್ದಾರೆ. ಈ ಕುರಿತು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ತನಿಖೆ ನಡೆಸುತ್ತಿದ್ದಾರೆ. ಪತ್ನಿಯ ಚಿಕಿತ್ಸೆಗಾಗಿ ತಂದಿದ್ದ ಹಣ ಕಳೆದುಕೊಂಡು ಹೇಮಣ್ಣ ಕಂಗಾಲಾಗಿದ್ದು, ದಿಕ್ಕು ತೋಚದೆ ಪರಿತಪಿಸುವಂತಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *