Breaking News

ಶಿವಮೊಗ್ಗ | ಮೂರು ತಿಂಗಳಿನಿಂದ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ಕಿಡಿಗೇಡಿ ವಶಕ್ಕೆ

ಕಳೆದ ಮೂರು ತಿಂಗಳಿನಿಂದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯೊಬ್ಬಳನ್ನು ಹಿಂಬಾಲಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಕಿಡಿಗೇಡಿಯನ್ನು ಅಕ್ಕಪಡೆ ಕಾರ್ಯಾಚರಣೆ ಮೂಲಕ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದೆ. ಕಳೆದ ಮೂರು ತಿಂಗಳಿಂದ ವ್ಯಕ್ತಿಯೋರ್ವ ಹಾಸ್ಟೆಲ್‌ಗೆ ಹೋಗಿ ಬರುವಾಗ ವಿದ್ಯಾರ್ಥಿನಿಯನ್ನು ನಿರಂತರವಾಗಿ ಫಾಲೋ ಮಾಡುತ್ತಿದ್ದಾನೆ ಎನ್ನುವ ಮಾಹಿತಿ ಅಕ್ಕಪಡೆಗೆ ಲಭಿಸಿತ್ತು. ಶಾಲೆ ಹಾಗೂ ಹಾಸ್ಟೆಲ್‌ಗಳಲ್ಲಿ ಅಕ್ಕಪಡೆ ನಡೆಸುತ್ತಿರುವ ಜಾಗೃತಿ ಕಾರ್ಯಕ್ರಮಗಳ ಪರಿಣಾಮವಾಗಿ ವಿದ್ಯಾರ್ಥಿನಿ ತಾನು ಅನುಭವಿಸುತ್ತಿದ್ದ ಮಾನಸಿಕ ಕಿರುಕುಳವನ್ನು ಅಕ್ಕಪಡೆಯ ಗಮನಕ್ಕೆ ತಂದಿದ್ದಾಳೆ. ಈ ಹಿನ್ನೆಲೆಯಲ್ಲಿ ಫೆ.3 ರಂದು ಬೆಳಿಗ್ಗೆ ಅಕ್ಕಪಡೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ಠಾಣೆಗೆ ಕರೆತಂದು ವಿಚಾರಣೆಗೆ ಒಳಪಡಿಸಲಾಗಿದೆ. ನಂತರ ಪ್ರಕರಣ ದಾಖಲಿಸಿ ಮುಂದಿನ ದಿನಗಳಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಆರೋಪಿಗೆ ಕಠಿಣ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *