ಅತಿ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಸಮೀಪ ನಡೆದಿದೆ. ಮೃತ ಮಹಿಳೆಯನ್ನು ಮಲ್ಲಿಕಾ ಜೋಗಿ (42) ಎಂದು ಗುರುತಿಸಲಾಗಿದೆ. ಅತಿ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ, ಅರ್ಚಕರ ಪತ್ನಿ ಮಲ್ಲಿಕಾ ಜೋಗಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು, ನಂತರ ಪಕ್ಕದ ಮರಕ್ಕೆ ಗುದ್ದಿದೆ ಎಂದು ತಿಳಿದು ಬಂದಿದೆ. ಮೃತ ಮಲ್ಲಿಕಾ ಜೋಗಿ ಮೇಗರವಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅಶೋಕ್ ಜೋಗಿ ಅವರ ಪತ್ನಿಯಾಗಿದ್ದಾರೆ. ಅಪಘಾತದಲ್ಲಿ ಅಶೋಕ್ ಜೋಗಿ ಕೂಡ ತೀವ್ರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

