Breaking News

ಹುಬ್ಬಳ್ಳಿ | ₹6.98 ಲಕ್ಷ ವಂಚನೆ; ಪ್ರಕರಣ ದಾಖಲು

ಹುಬ್ಬಳ್ಳಿ: ಫೇಸ್‌ಬುಕ್‌ ಖಾತೆಯಲ್ಲಿನ ಜಾಹೀರಾತಿನ ಲಿಂಕ್‌ ಒತ್ತಿದ ಇಲ್ಲಿನ ವಿದ್ಯಾನಗರದ ಗೀತಾ ಅಮರಶೆಟ್ಟಿ ಅವರಿಗೆ ವಾಟ್ಸ್‌ಆಯಪ್‌ನಲ್ಲಿ ಸಂದೇಶ ಕಳುಹಿಸಿದ ಅಪರಿಚಿತ ವ್ಯಕ್ತಿ, ಅವರಿಂದ ₹6.98 ಲಕ್ಷ ವರ್ಗಾಯಿಸಿಕೊಂಡು ವಂಚಿಸಿದ್ದಾನೆ. ಗೀತಾ ಅವರ ಫೇಸ್‌ಬುಕ್‌ ಖಾತೆಯಲ್ಲಿ ಝಾಮ್‌ ಝಾಮ್‌ ಗಿಫ್ಟ್‌ ಜಾಹೀರಾತು ಪ್ರದರ್ಶನವಾಗಿದ್ದು, ಅದರ ಲಿಂಕ್‌ ಒತ್ತಿದ್ದರು. ತಕ್ಷಣ ಅವರ ವಾಟ್ಸ್‌ಆಯಪ್‌ಗೆ ಸಂದೇಶ ಕಳಿಸಿದ ಆರೋಪಿ, ‘ನೀವು ಮೊಬೈಲ್‌, ಲ್ಯಾಪ್‌ಟಾಪ್‌, ವಾಚ್‌ ಹಾಗೂ ಇತರ ಬೆಲೆಬಾಳುವ ವಸ್ತುಗಳನ್ನು ಗಿಫ್ಟ್‌ ರೂಪದಲ್ಲಿ ಪಡೆದಿದ್ದೀರಿ. ಅದನ್ನು ಪಡೆಯಲು ವಿವಿಧ ಶುಲ್ಕ ಪಾವತಿಸಬೇಕು’ ಎಂದು ಹಣ ವರ್ಗಾಯಿಸಿಕೊಂಡು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹುಬ್ಬಳ್ಳಿ ಸೈಬರ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *