Breaking News

ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ಮನೆ ಮಾಲೀಕ

ಗುವಾಹಟಿಯ ಮನೆಯೊಂದರಲ್ಲಿ ವ್ಯಕ್ತಿಯೊಬ್ಬ ಮಂಚದ ಪೆಟ್ಟಿಗೆಯಲ್ಲಿ 13 ವರ್ಷದ ಬಾಲಕಿಯನ್ನು ಅಡಗಿಸಿಟ್ಟಿದ್ದ ವಿಡಿಯೋ ವೈರಲ್ ಆಗಿದೆ. ಮಕ್ಕಳ ಮೇಲಿನ ದೌರ್ಜನ್ಯದ ಪ್ರಕರಣ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಬಾಲಕಿಯನ್ನು ಮಂಚದ ಪೆಟ್ಟಿಗೆಯಿಂದ ಹೊರಗೆ ತೆಗೆದಿದ್ದಾರೆ.ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮನೆಗೆಲಸಗಾರರಾಗಿ ನೇಮಿಸಿಕೊಂಡು ದೌರ್ಜನ್ಯವೆಸಗುವವರ ಸಂಖ್ಯೆ ಹೆಚ್ಚಾಗಿದೆ. ಬಾಲಕಿ ಸುಮಾರು ಆರು ವರ್ಷಗಳಿಂದ ಆ ಮನೆಯಲ್ಲಿ ಕೆಲಸ ಮಾಡುತ್ತಿದ್ದಳು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮನೆ ಮಾಲೀಕ ಅರಿನಾ ಲಸ್ಕರ್ ಖತುನ್, ಬಾಲಕಿಯ ಮೇಲೆ ಪದೇ ಪದೇ ದೈಹಿಕವಾಗಿ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳು ಮನೆಗೆ ಬರಬಹುದೆಂಬ ಸುಳಿವು ಸಿಕ್ಕ ಬಳಿಕ ಮನೆ ಮಾಲೀಕರು ಸುಮಾರು 25 ನಿಮಿಷಗಳಿಂದ ಮಂಚದ ಬಾಕ್ಸ್​ನಲ್ಲಿ ಆಕೆಯನ್ನು ಬಚ್ಚಿಟ್ಟಿದ್ದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *