Breaking News

ನಂತೂರಿನಲ್ಲಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿ, ಹಿಂಬದಿ ಸವಾರೆ ಸಾವು

ಮಂಗಳೂರು: ಸ್ಕೂಟರ್ ಗೆ ಸಿಟಿ ಬಸ್‌ವೊಂದು ಡಿಕ್ಕಿ ಹೊಡೆದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಮಂಗಳೂರಿನ ನಂತೂರು ವೃತ್ತದ ಬಳಿ ನಡೆದಿದೆ. ಮೃತರನ್ನು ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಗಾಯಗೊಂಡಿದ್ದಾರೆ.ಬಸ್ ಮತ್ತು ಸ್ಕೂಟರ್ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಹೋಗುತ್ತಿದ್ದವು. ನಂತೂರು ಬಸ್‌ ನಿಲ್ದಾಣದ ಬಳಿ ಸ್ಕೂಟರ್ ಗೆ ಬಸ್ ಢಿಕ್ಕಿಯಾದ ಪರಿಣಾಮ ಸ್ಕೂಟರ್ ಬಸ್ ನಡಿ ಬಿದ್ದಿದೆ. ಈ ವೇಳೆ ಸಹಸವಾರೆಯ ಮೇಲೆಯೆ ಬಸ್ ನ ಟಯರ್ ಹರಿದು ಹೋಗಿತ್ತು. ಪರಿಣಾಮ ದೀಪ್ತಿ ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *