Breaking News

ಬೆಂಗಳೂರಿನ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಬಾಂಬ್ ಬೆದರಿಕೆ ಸಂದೇಶ ಪ್ರಕರಣಗಳು ಹೆಚ್ಚುತ್ತಿದೆ. ಇದೀಗ ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಹಾಕಿದ್ದಾನೆ. ಇಟಲಿಯ ಕಾನ್ಸುಲ್ ಜನರಲ್ ಕಚೇರಿಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂವ್ ಸ್ಪೋಟಿಸುವುದಾಗಿ ದುಷ್ಕರ್ಮಿಗಳು ಎಚ್ಚರಿಕೆ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ಪತ್ತೆ ದಳ ಇಡೀ ಪ್ರದೇಶವನ್ನು ತಪಾಸಣೆ ನಡೆಸುತ್ತಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಯಭಾರಿ ಕಚೇರಿಯ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಚೇರಿಯ ಸಿಬ್ಬಂದಿಯನ್ನು ಸುರಕ್ಷಿತವಾಗಿ ಹೊರಗೆ ಕಳುಹಿಸಿ, ಶೋಧ ಕಾರ್ಯ ಮುಂದುವರಿಸಲಾಗಿದೆ. ಈ ಬೆದರಿಕೆ ಕರೆ ಎಲ್ಲಿಂದ ಬಂತು? ಇದರ ಹಿಂದೆ ಯಾರಿದ್ದಾರೆ? ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *