Breaking News

ವಿಜಯಪುರದಲ್ಲಿ ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ : 20ಕ್ಕೂ ಹೆಚ್ಚು ಕಾರುಗಳು ಸುಟ್ಟು ಭಸ್ಮ!

ವಿಜಯಪುರದ HMK ಕಾರು ಸರ್ವಿಸ್ ಸೆಂಟರ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿರುವ ಕಾರು ಸರ್ವಿಸ್ ಸೆಂಟರ್ ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು, ಹನುಮಂತ ಕನವಡಿ ಎಂಬವರಿಗೆ ಸೇರಿದ ಕಾರು ಸರ್ವಿಸ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.ಕಾರು ಸರ್ವಿಸ್ ಸೆಂಟರ್ ಗೆ ರಿಪೇರಿ ಮತ್ತು ಸರ್ವಿಸ್ಗಾಗಿ ಬಂದಿದ್ದು, ಸುಮಾರು 20 ಕಾರುಗಳು ಸುಟ್ಟು ಭಸ್ಮವಾಗಿದ್ದು 1 ಕೋಟಿಗೂ ಅಧಿಕ ನಷ್ಟವಾಗಿದೆ. ಅಗ್ನಿ ದುರಂತಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಅಂಗಡಿಯಲ್ಲಿದ್ದ 35 ಲಕ್ಷ ಮೌಲ್ಯದ ಕಾರಿನ ಬಿಡಿ ಭಾಗಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಘಟನೆ ಕುರಿತಂತೆ ವಿಜಯಪುರದ ಗೋಲಗುಂಬಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *