Breaking News

ಜಿಗಣಿಯಲ್ಲಿ ಅಪಘಾತ: ಬೈಕ್‌ ಸವಾರು ಸಾವು

ಆನೇಕಲ್: ತಾಲ್ಲೂಕಿನ ಜಿಗಣಿಯಲ್ಲಿ ಬುಧವಾರ ಚಾಲಕನ ನಿಯಂತ್ರಣ ತಪ್ಪಿ ಕಾರವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ವಿಜಯಪುರದ ಸಂಗಮೇಶ್(50) ಮೃತರು. ಕಾರು ಚಾಲಕನನ್ನು ಜಿಗಣಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಗಣಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಯ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸಂಗಮೇಶ್ ಹರಪನಹಳ್ಳಿಯ ಕ್ಲಾಸಿಕ್ ಬಡಾವಣೆಯಲ್ಲಿ ವಾಸವಾಗಿದ್ದರು. ಬುಧವಾರ ಎಂದಿನಂತೆ ಕಂಪನಿಗೆ ತೆರಳುವ ಸಮಯದಲ್ಲಿ ಕಾರು ಏಕಾಏಕಿ ಡಿಕ್ಕಿ ಹೊಡೆದಿದ್ದರಿಂದ ಸಂಗಮೇಶ್ ತಲೆಯ ಭಾಗಕ್ಕೆ ಗಾಯವಾಗಿ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *