Breaking News

ಮೈಸೂರು : ಮೂವರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ

ಲೋಕಾಯುಕ್ತ ಪೊಲೀಸರು ಇಂದು ನಗರದ ಮೂವರು ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ಲೋಕಾಯುಕ್ತ ಪೊಲೀಸರು ತಲಾಶ್‌ ನಡೆಸಿದ್ದಾರೆ. ಜ್ಯೂನಿಯರ್‌ ಎಂಜಿನಿಯರ್‌ ಕೆ.ಆರ್‌. ಚಂದ್ರಶೇಖರ್‌, ಮೈಸೂರು ನಗರ ಪಾಲಿಕೆಯ ಅಲ್ತಾಫ್‌ ಹುಸೇನ್‌ ಜಪ್ಪಾರ್ಪಿ, ಡೆಪ್ಯುಟಿ ಎಲೆಕ್ಟ್ರಿಕಲ್‌ ಇಸ್‌‍ಪೆಕ್ಟರ್‌ ದಾಳಿಗೊಳಗಾದವರು. ನಗರದ ವಿಜಯನಗರ ಮೊದಲ ಹಾಗೂ ಎರಡನೇ ಹಂತ ಸೇರಿ ಆರು ಕಡೆ ಹಾಗೂ ತಿ.ನರಸೀಪುರದಲ್ಲಿ ಒಂದು ಕಡೆ ದಾಳಿ ನಡೆಸಿದ್ದಾರೆ. ಅಕ್ರಮ ಆದಾಯಗಳಿಕೆ ಹಿನ್ನೆಲೆಯಲ್ಲಿ ಈ ಅಧಿಕಾರಿಗಳ ವಿರುದ್ಧ ಸತತ ದೂರುಗಳು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಈ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *