ಪಾಲಕ್ಕಾಡ್ : ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣನ್ನು ಸಾಗಿಸುತ್ತಿದ್ದ ಟ್ರಕ್ನಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದು, ಆತಂಕ ಮನೆ ಮಾಡಿದೆ. ತಮಿಳುನಾಡಿನ ಧರ್ಮಪುರಿಯ ಪಾಪರಪಟ್ಟಿ ಮೂಲದ ಲಾರಿ ಚಾಲಕ ಸೆಂಥಿಲ್ ಕುಮಾರ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 100ಕ್ಕೂ ಹೆಚ್ಚು ಪೆಟ್ಟಿಗೆಗಳಲ್ಲಿ, ಜಿಲೆಟಿನ್ ಹಾಗೂ ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬುಧವಾರ ರಾತ್ರಿ 9 ಗಂಟೆ ಸುಮಾರಿಗೆ ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು ಬಳಿಯ ಸರ್ವೀಸ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಲಾರಿಯ ಮೇಲೆ ರಾಶಿ ಹಾಕಿದ್ದ ಕಲ್ಲಂಗಡಿ ಹಣ್ಣುಗಳನ್ನು ತೆಗೆದು ಪರಿಶೀಲಿಸಿದಾಗ ಪೆಟ್ಟಿಗೆಗಳಲ್ಲಿ ಸ್ಫೋಟಕಗಳು ತ್ರಿಶೂರ್ಗೆ ಸಾಗಿಸಲಾಗುತ್ತಿತ್ತು ಎಂದು ಸೆಂಥಿಲ್ ಕುಮಾರ್ ತಿಳಿಸಿದ್ದಾರೆ. ಸುಳಿವು ದೊರೆತ ನಂತರ, ದಕ್ಷಿಣ ಇನ್ಸ್ಪೆಕ್ಟರ್ ವಿಪಿನ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಯಿತು. ಬಾಂಬ್ ನಿಷ್ಕ್ರಿಯ ದಳವೂ ಸ್ಥಳಕ್ಕೆ ತಲುಪಿತ್ತು. ಚಾಲಕನನ್ನು ವಿಚಾರಣೆ ನಡೆಸಿದ ನಂತರವೇ ಹೆಚ್ಚಿನ ಮಾಹಿತಿ ಲಭ್ಯವಾಗಲಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಕಳೆದ ವರ್ಷವಷ್ಟೇ ಪಾಲಕ್ಕಾಡ್ ಮತ್ತು ಕೊಯಮತ್ತೂರಿನ ಪೊಲೀಸರು ತಮಿಳುನಾಡಿನಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ ನಲವತ್ತು ಸಾವಿರಕ್ಕೂ ಹೆಚ್ಚು ಜಿಲೆಟಿನ್ಗಳು ಹಾಗೂ ಐದು ಸಾವಿರಕ್ಕೂ ಹೆಚ್ಚು ಡಿಟೋನೇಟರ್ಗಳನ್ನು ವಶಪಡಿಸಿಕೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

