ಪುತ್ತೂರು: ಮಾಧ್ಯಮಗಳ ಮುಂದೆ ತನ್ನ ವಿರುದ್ಧ ಮಾನಿಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರು ನೀಡಿದ್ದ ದೂರಿನ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪುತ್ತೂರು ನಗರ ಠಾಣೆ ಪೊಲೀಸರು ನೋಟೀಸ್ ನೀಡಿದ್ದಾರೆ. ಯುವತಿಗೆ ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣದಲ್ಲಿ ನಮ್ಮ ಕುಟುಂಬದ ವಿರುದ್ಧ ಮಾಧ್ಯಮಗಳಿಗೆ ನೀಡಿರುವ ಹೇಳಿಕೆ ಮತ್ತು ಸಂದರ್ಶನಗಳಲ್ಲಿ ಮಾನಹಾನಿಕರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಪಿ.ಜಿ.ಜಗನ್ನಿವಾಸ್ ರಾವ್ ಅವರು ಪ್ರತಿಭಾ ಕುಳಾಯಿ ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಅವರಿಗೆ ದೂರು ನೀಡಿದ್ದರು. ಈ ದೂರು ಅರ್ಜಿಯನ್ನು ವಿಚಾರಣೆಗಾಗಿ ಎಸ್ಪಿ ಕಚೇರಿಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ಕಳುಹಿಸಿ ಕೊಟ್ಟು ವಿಚಾರಣೆ ನಡೆಸುವಂತೆ ಆದೇಶಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪುತ್ತೂರು ನಗರ ಠಾಣೆಯ ಪೊಲೀಸರು ದೂರು ಅರ್ಜಿಯ ವಿಚಾರಣೆಗೆ ಪುತ್ತೂರು ನಗರ ಠಾಣೆಗೆ ಹಾಜರಾಗುವಂತೆ ಪ್ರತಿಭಾ ಕುಳಾಯಿ ಅವರಿಗೆ ಜ.27ರಂದು ನೋಟಿಸ್ ಜಾರಿ ಮಾಡಿದ್ದಾರೆ. ಆದರೆ ಪ್ರತಿಭಾ ಕುಳಾಯಿ ಅವರು ಈ ತನಕ ವಿಚಾರಣೆಗಾಗಿ ಹಾಜರಾಗಿಲ್ಲ ಮತ್ತು ನೋಟಿಸ್‌ಗೂ ಯಾವುದೇ ಉತ್ತರ ನೀಡಿಲ್ಲ ಎಂದು ತಿಳಿದು ಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

