Breaking News

ಕರ್ತವ್ಯ ಲೋಪ: ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ

ಚಾಮರಾಜನಗರ: ಹಾಸ್ಟೆಲ್‌ಗಳಲ್ಲಿ ಅವ್ಯವಸ್ಥೆ, ಮಧ್ಯಾಹ್ನದ ಬಿಸಿಯೂಟ ಆಹಾರ ಪದಾರ್ಥಗಳ ದುರ್ಬಳಕೆ, ಬಿಲ್‌ ಹಾಗೂ ಕಡತಗಳ ನಿರ್ವಹಣೆ ಮಾಡದ ಆರೋಪದ ಮೇಲೆ ನಾಲ್ವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗಿದೆ. ನ್ಯಾಯಬೆಲೆ ಅಂಗಡಿ ವಿತರಕನ ಪರವಾನಗಿ ಅಮಾನತುಗೊಳಿಸಲಾಗಿದೆ.ಬಂಡಿಗೆರೆ ಅಂಗನವಾಡಿ ಕಾರ್ಯಕರ್ತೆಯನ್ನು ಅಮಾನತುಗೊಳಿಸಲಾಗಿದೆ. ಸರ್ಕಾರಿ ಶಾಲೆಯ ಶಿಕ್ಷಕಿ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವಾರ್ಡನ್‌ಗಳನ್ನು ಒಂದು ತಿಂಗಳು ಕಡ್ಡಾಯ ರಜೆ ಮೇಲೆ ಕಳಿಸಿ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಚಾಮರಾಜನಗರ, ಗುಂಡ್ಲುಪೇಟೆ, ಕೊಳ್ಳೇಗಾಲ ತಾಲ್ಲೂಕಿನಲ್ಲಿರುವ ಸರ್ಕಾರಿ ಹಾಸ್ಟೆಲ್‌ಗಳು, ಶಾಲೆಗಳು, ಅಂಗನವಾಡಿ, ಆಹಾರ ದಾಸ್ತಾನು ಗೋದಾಮುಗಳು, ಸರ್ಕಾರಿ ಆಸ್ಪತ್ರೆಗಳಿಗೆ ಮಂಗಳವಾರ ದಿಢೀರ್ ಭೇಟಿ ನೀಡಿದ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ.ಎಚ್‌.ಕೃಷ್ಣ ಅವರ ಸೂಚನೆ ಮೇರೆಗೆ ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *