Breaking News

ಪತ್ರಕರ್ತರ ಸೋಗಿನಲ್ಲಿ ಮಹಿಳಾ ಅಧಿಕಾರಿಗೆ ಬ್ಲ್ಯಾಕ್‌ಮೇಲ್; ಮೂವರ ಬಂಧನ

ನಕಲಿ ಪತ್ರಕರ್ತರ ಬ್ಲ್ಯಾಕ್‌ಮೇಲ್ ಜಾಲ: ಮಹಿಳಾ ಅಧಿಕಾರಿಗೆ ಬೆದರಿಕೆ, ಮೂವರು ಅರೆಸ್ಟ್…

ಬೆಳಗಾವಿ : ಸರಕಾರಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವೀಡಿಯೊ ಚಿತ್ರೀಕರಿಸಿ, ಅದನ್ನು ಸಾಮಾಜಿಕ ಜಾಲತಾಣಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಪತ್ರಕರ್ತರ ಸೋಗಿನಲ್ಲಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಗಳನ್ನು ಸಮೀರ್ ನಿಸಾರ್ ಅಹ್ಮದ್ ಶೇಖ್ (32), ಅಬ್ದುಲ್ ರಶೀದ್ ಮಕಾನದಾರ (51) ಮತ್ತು ಮುಹಮ್ಮದ್ ಬಾಳೇಕುಂದ್ರಿ ಎಂದು ಗುರುತಿಸಲಾಗಿದೆ. ಆರೋಪಿಗಳು ಮಹಿಳಾ ಅಧಿಕಾರಿ ಮನೆಯ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಖಾಸಗಿ ವೀಡಿಯೊ ಗಳನ್ನು ದಾಖಲಿಸಿಕೊಂಡು, ಆರಂಭದಲ್ಲಿ ಒಂದು ಕೋಟಿ ರೂ.ಗೆ ಬೇಡಿಕೆ ಇಟ್ಟಿದ್ದು, ನಂತರ 50 ಲಕ್ಷ ರೂ. ನೀಡುವಂತೆ ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಮಹಿಳಾ ಅಧಿಕಾರಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ ಹಿನ್ನೆಲೆಯಲ್ಲಿ, ಸಿಪಿಐ ಬಿ.ಆರ್. ಗಡ್ಡೇ ಕರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ತಿಳಿಸಿದ್ದಾರೆ.

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *